ಬೆಂಗಳೂರು: ರಾಜ್ಯದ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರೀಲೀಫ್ ನೀಡಿದೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ ಬಗ್ಗೆ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರ ದಾಖಲಿಸಿಕೊಂಡು ನೋಟಿಸ್ ಜಾರಿ ಮಾಡಿತ್ತು.
ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿದ ಹಿನ್ನಲೆಯಲ್ಲಿ 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ಹಾಗೂ ವಿವರಣೆ ನೀಡುವಂತೆ ಸೂಚಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಎಚ್.ಡಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ತಡೆಯಾಜ್ಞೆ ನೀಡಿದೆ.





