ಧಾರವಾಡ: ಅಪ್ರಾಪ್ತ ಬಾಲಕಿಗೆ ಲೈಗಿಂಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬಿಗ್ ರಿಲೀಫ್ ನೀಡಿದೆ.
ಧಾರಾವಾಡ ಹೈಕೋರ್ಟ್‌ನಲ್ಲಿ ಜನವರಿ.17 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು(ಫೆಬ್ರವರಿ.7) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ ಆದೇಶ ಹೊಡಿಸಿದೆ.
ಪ್ರಕರಣದ ಹಿನ್ನೆಲೆ ಏನು?
ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಗಿಂಕ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ 2024 ಮಾಚ್.14 ರಂದು ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಜೂನ್.13 ರಂದು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜೂನ್.14 ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಸಿಐಡಿ ಅಧಿಕಾರಿಗಳಿಗೆ ಬಿಎಸ್‌ವೈ ಅವರನ್ನು ಬಂಧಿಸದಂತೆ ಸೂಚಿಸಿತ್ತು.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಜನವರಿ.17 ರಂದು ಅಂತಿಮವಾಗಿ ವಿಚಾರಣೆ ನಡೆಸಿದ ಹೈಕೋರ್ಟ್ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಆದರೆ ಇದೀಗ ಈ ವಿಚಾರದಲ್ಲಿ ಅಂತಿಮಗೊಳಿಸಿ ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬಿಗ್ ರಿಲೀಫ್ ನೀಡಿದೆ.