ಧಾರವಾಡ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಇಂದು(ಫೆಬ್ರವರಿ.7) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಕಾಯ್ದಿರಿಸಿದ್ದ ಆದೇಶವನ್ನು ಅಂತಿಮಗೊಳಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ.
ಹೈಕೋರ್ಟ್ ಆದೇಶವೇನು?
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರುದಾರರ ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ಧಾರವಾಡ ಹೈಕೋರ್ಟ್ ವಾದ-ಪ್ರತಿವಾದವನ್ನು ಆಲಿಸಿ ತೀರ್ಪು ಅನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಇಂದು ಪ್ರಕಟಿಸಿದ್ದು, ಸಿಬಿಐ ತನಿಖೆಗೆ ವಹಿಸುವ ಅರ್ಜಿ ವಿಚಾರಣೆಯನ್ನು ವಜಾಗೊಳಿಸಲಾಗಿದೆ ಎಂದು ಅಂತಿಮ ಆದೇಶ ಹೊರಡಿಸಿದೆ.
ಇಂದು ತೀರ್ಪು ಪ್ರಕಟಿಸಿರುವ ಹೈಕೋರ್ಟ್, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿಲ್ಲ ಎಂದು ಹೇಳಲಾಗದು. ಹೀಗಾಗಿ ಮತ್ತೊಂದು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಅಗತ್ಯವಿಲ್ಲ. ಇನ್ನೂ ಲೋಕಾಯುಕ್ತ ತನಿಖೆ ಅಸಮರ್ಪಕ ಎನ್ನಲೂ ಕಾರಣಗಳಿಲ್ಲ. ಅಲ್ಲದೇ ಮುಡಾ ಕೇಶ್ ಸಿಬಿಐ ತನಿಖೆಗೆ ನೀಡುವ ಅಗತ್ಯತೆ ಕಂಡು ಬಂದಿಲ್ಲ ಎಂದು ಹೇಳಿದೆ.
ಹೈಕೋರ್ಟ್‌ನ ಈ ಆದೇಶದ ಅನ್ವಯ ದೂರುದಾರ ಸ್ನೇಹಮಯೊ ಕೃಷ್ಣಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದ್ದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಸಿಬಿಐ ತನಿಖೆಯಿಂದ ಬಚಾವ್ ಆಗಿದ್ದಾರೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…