ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಭಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ.
ಈ ಹಿಂದೆ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಯನ್ನು ಅಕ್ರಮ ಎಂದು ಘೋಷಿಸಿ ನಿಷೇಧಿಸಿತ್ತು. ಇದರ ವಿರುದ್ಧ ರ್ಯಾಪಿಡೋ, ಊಬರ್ ಮತ್ತು ಓಲಾ ಸೇರಿದಂತೆ ಹಲವು ಕಂಪನಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆಯ ನಂತರ ವಿಭಾಗೀಯ ಪೀಠವು ಸರ್ಕಾರದ ನಿಷೇಧ ಆದೇಶವನ್ನು ತೆರವುಗೊಳಿಸಿದೆ
ಬೈಕ್, ಟ್ಯಾಕ್ಸಿ ಸಂಸ್ಥೆಗಳ ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್ ಸರ್ಕಾರ ಬೈಕ್, ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ತೀರ್ಪು ನೀಡಿದೆ. ಈ ಮೂಲಕ ರಾಜ್ಯದಲ್ಲಿ ಬೈಕ್, ಟ್ಯಾಕ್ಸಿ ಸಂಚಾರ ಎಂದಿನಂತೆ ಮುಂದುವರಿಯಲಿದೆ.





