Mysore
21
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌ ಕೊಟ್ಟ ಹೈಕೋರ್ಟ್‌

mahesh shetty timrodi

ಬೆಂಗಳೂರು: ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿರುವುದನ್ನು ಪ್ರಶ್ನಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ. ಸದ್ಯಕ್ಕೆ ಗಡಿಪಾರು ಆದೇಶ ಜಾರಿಗೆ ತರದಂತೆ ಸೂಚನೆ ನೀಡಿದೆ.

ಅಕ್ಟೋಬರ್.‌8ರವರೆಗೆ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಗಡಿಪಾರು ಆದೇಶ ಕೈಗೊಳ್ಳದಂತೆ ಹೈಕೋರ್ಟ್‌ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮಹೇಶ್‌ ಶೆಟ್ಟಿಗೆ ಕೊಂಚ ರಿಲೀಫ್‌ ಸಿಕ್ಕಂತಾಗಿದೆ.

Tags:
error: Content is protected !!