Mysore
30
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಬಿಜೆಪಿ ಸಂಸದ ಯದುವೀರ್‌ಗೆ ಹೈಕೋರ್ಟ್‌ನಿಂದ ನೋಟಿಸ್‌

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್‌ ಒಡೆಯರ್‌ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ರೇವತಿ ರಾಜ್‌ ಅಲಿಯಾಸ್‌ ಭೀಮಪುತ್ರಿ ರೇವತಿ ರಾಜ್‌ ತಮ್ಮ ನಾಮಪತ್ರ ತಿರಸ್ಕರಿಸಿರುವುದಕ್ಕೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇಂದು (ಜ.24) ನ್ಯಾಯಾಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಪ್ರತಿವಾದಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಹಿನ್ನಲೆ:

ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ರೇವತಿ ರಾಜ್‌ 2024ರ ಏಪ್ರಿಲ್‌ 4ರಂದು ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದ ಕಲಂ 7, 7(ಎ), 7(ಬಿ) ಗಳನ್ನು ಸರಿ ಭರ್ತಿ ಮಾಡಿಲ್ಲ ಎಂದು ಚುನಾವಣಾಧಿಕಾರಿ ನಾಮಪತ್ರ ತಿರಸ್ಕರಿಸಿದ್ದರು.

ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಸಿದ್ದರೂ ತಮ್ಮ ನಾಮಪತ್ರ ತಿರಸ್ಕರಿಸಲಾಗಿದೆ. ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ರೇವತಿ ರಾಜ್‌ ಕೋರ್ಟ್‌ ಮೊರೆ ಹೋಗಿದ್ದರು.

 

Tags: