ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಯದುವೀರ್ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ರೇವತಿ ರಾಜ್ ಅಲಿಯಾಸ್ ಭೀಮಪುತ್ರಿ ರೇವತಿ ರಾಜ್ ತಮ್ಮ ನಾಮಪತ್ರ ತಿರಸ್ಕರಿಸಿರುವುದಕ್ಕೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇಂದು (ಜ.24) ನ್ಯಾಯಾಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಪ್ರತಿವಾದಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಹಿನ್ನಲೆ:
ಲೋಕಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ರೇವತಿ ರಾಜ್ 2024ರ ಏಪ್ರಿಲ್ 4ರಂದು ಆಯೋಗಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದರೆ ನಾಮಪತ್ರದ ಕಲಂ 7, 7(ಎ), 7(ಬಿ) ಗಳನ್ನು ಸರಿ ಭರ್ತಿ ಮಾಡಿಲ್ಲ ಎಂದು ಚುನಾವಣಾಧಿಕಾರಿ ನಾಮಪತ್ರ ತಿರಸ್ಕರಿಸಿದ್ದರು.
ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಸಿದ್ದರೂ ತಮ್ಮ ನಾಮಪತ್ರ ತಿರಸ್ಕರಿಸಲಾಗಿದೆ. ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ರೇವತಿ ರಾಜ್ ಕೋರ್ಟ್ ಮೊರೆ ಹೋಗಿದ್ದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…