ಬೆಂಗಳೂರು: ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಂಜಾರಿಯಾ ಮತ್ತು ಅರವಿಂದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.
ಕಾವೇರಿ ನದಿಯಲ್ಲಿ ಮಾಲಿನ್ಯ ಹೆಚ್ಚಳವಾಗಿದೆ. ಇದನ್ನು ಪರಿಗಣಿಸಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಮಾರ್ಗಸೂಚಿ ರೂಪಿಸಬೇಕು. ಕಾವೇರಿ ನದಿಯನ್ನು ಜ್ಯುರಿಸ್ಟಿಕ್ ಪರ್ಸನ್ ಎಂದು ಘೋಷಿಸಿ ಅಂತಾ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.
ವಾದ ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದಲ್ಲದೇ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್.11ಕ್ಕೆ ಮುಂದೂಡಿದೆ.





