ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ಕೋರ್ಟ್ ಮುಂದೂಡುವ ಮೂಲಕ ಬಿಗ್ ಶಾಕ್ ಕೊಟ್ಟಿದೆ
ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್ ಗಳಲ್ಲಿ ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ಪಡೆದಿದ್ದರು. ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರು ಮನವಿ ಮಾಡಿದ್ರು. ಆದರೆ ಕೃಷ್ಣ ದೀಕ್ಷಿತ್ ಅವರಿಂದ ಹೈಕೋರ್ಟ್ ಪೀಠ ತನಿಖೆ ನಡೆಯಲಿ, ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆಯನ್ನು ೨ ವಾರಗಳ ಮುಂದೂಡಿ ಆದೇಶ ಹೊರಡಿಸಿದ್ದಾರೆ.





