Mysore
25
broken clouds

Social Media

ಬುಧವಾರ, 09 ಜುಲೈ 2025
Light
Dark

ಬೈಕ್‌ ಟ್ಯಾಕ್ಸಿಗಳಿಗೆ ಬಿಗ್‌ ಶಾಕ್‌ ನೀಡಿದ ಹೈಕೋರ್ಟ್‌

high court of karnataka

ಬೆಂಗಳೂರು: ಓಲಾ, ಊಬರ್‌, ರ್ಯಾಪಿಡೋ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಬಿಗ್‌ ಶಾಕ್‌ ನೀಡಿದೆ.

ಬೈಕ್‌, ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್‌ ನಿರಾಕರಣೆ ಮಾಡಿದೆ.

ಈ ಬಗ್ಗೆ ಬೈಕ್‌, ಟ್ಯಾಕ್ಸಿಗಳ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಚಾರಣೆಯನ್ನು ಜೂನ್.‌24ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.

ಬೈಕ್‌, ಟ್ಯಾಕ್ಸಿಗಳಿಗೆ ಪರ್ಮಿಟ್‌ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ ಎಂದು ಸರ್ಕಾರದ ಪರ ವಕೀಲ ಶಶಿಕಿರಣ್‌ ಶೆಟ್ಟಿ ತಿಳಿಸಿದ್ದಾರೆ. ಅಲ್ಲದೇ 8 ರಾಜ್ಯಗಳಲ್ಲಿ ಮಾತ್ರ ಬೈಕ್‌ ಟ್ಯಾಕ್ಸಿಗಳಿಗೆ ಪರ್ಮಿಟ್‌ ನೀಡಲಾಗಿದೆ. ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಅನುಮತಿ ನೀಡಿಲ್ಲ. ನಾಲ್ಕು ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್‌ ಟ್ಯಾಕ್ಸಿಗಳು ನಡೆಯುತ್ತಿವೆ.

ಸುಪ್ರೀಂಕೋರ್ಟ್‌ ಕೂಡ ಬೈಕ್‌ ಟ್ಯಾಕ್ಸಿಗಳಿಗೆ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ವಾದ ಮಂಡಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಮೇಲ್ಮನವಿ ಅರ್ಜಿಗಳನ್ನು ಜೂನ್.‌24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದು ತಿಳಿಸಿದೆ.

Tags:
error: Content is protected !!