high court of karnataka
ಬೆಂಗಳೂರು: ಓಲಾ, ಊಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
ಬೈಕ್, ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.
ಈ ಬಗ್ಗೆ ಬೈಕ್, ಟ್ಯಾಕ್ಸಿಗಳ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಜೂನ್.24ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಬೈಕ್, ಟ್ಯಾಕ್ಸಿಗಳಿಗೆ ಪರ್ಮಿಟ್ ನಿಯಮ ರೂಪಿಸಲು ಸರ್ಕಾರ ಸಿದ್ಧವಿಲ್ಲ ಎಂದು ಸರ್ಕಾರದ ಪರ ವಕೀಲ ಶಶಿಕಿರಣ್ ಶೆಟ್ಟಿ ತಿಳಿಸಿದ್ದಾರೆ. ಅಲ್ಲದೇ 8 ರಾಜ್ಯಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿಗಳಿಗೆ ಪರ್ಮಿಟ್ ನೀಡಲಾಗಿದೆ. ಕರ್ನಾಟಕ ಸೇರಿ ಉಳಿದ ರಾಜ್ಯಗಳಲ್ಲಿ ಅನುಮತಿ ನೀಡಲಾಗಿಲ್ಲ. ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿಲ್ಲ. ನಾಲ್ಕು ವರ್ಷಗಳಿಂದ ಮಧ್ಯಂತರ ಆದೇಶದ ಮೇಲೆ ಬೈಕ್ ಟ್ಯಾಕ್ಸಿಗಳು ನಡೆಯುತ್ತಿವೆ.
ಸುಪ್ರೀಂಕೋರ್ಟ್ ಕೂಡ ಬೈಕ್ ಟ್ಯಾಕ್ಸಿಗಳಿಗೆ ಮಧ್ಯಂತರ ಆದೇಶ ನಿರಾಕರಿಸಿದೆ ಎಂದು ವಾದ ಮಂಡಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇಲ್ಮನವಿ ಅರ್ಜಿಗಳನ್ನು ಜೂನ್.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದು ತಿಳಿಸಿದೆ.
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…