ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕೋರ್ಟ್ ಫುಲ್ ಟೆನ್ಷನ್ ನೀಡಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಫುಲ್ ಟೆನ್ಷನ್ ನೀಡಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಡಿಕೆಶಿಗೆ ಕೋರ್ಟ್ ಏನು ತೀರ್ಪು ಕೊಡುತ್ತೆ ಎನ್ನುವ ಟೆನ್ಷನ್ ಶುರುವಾಗಿದೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.
ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಅಂತ್ಯವಾಗಿದ್ದು, ಆದೇಶ ಕಾಯ್ದಿರಿಸಲಾಗಿದೆ.
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…