ರಾಜ್ಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಶಾಕ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಸಿಬಿಐ, ಲೋಕಾಯುಕ್ತ, ಕೇಂದ್ರ ಗೃಹ ಇಲಾಖೆ, ಪ್ರರಕಣದ ಪ್ರಮುಖ ಆರೋಪಿಗಳಾದ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನಯ್ಯ, ಹಾಗೂ ಜಮೀನು ಮಾಲೀಕ ದೇವರಾಜು ಅವರುಗಳಿಗೆ ನೋಟಿಸ್ ಜಾರಿಗೊಳಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಏಪ್ರಿಲ್.28ಕ್ಕೆ ಮುಂದೂಡಿತು.

ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಲೋಕಾಯುಕ್ತ ಪೊಲೀಸರು ಸರ್ಕಾರದ ಅಧೀನದಲ್ಲಿದ್ದಾರೆ. ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ. ಏಪ್ರಿಲ್.28ರಂದು ಮತ್ತೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯದಲ್ಲಿ ಪರ-ವಿರೋಧ ವಾದ ಮಂಡನೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

10 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

11 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

15 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

15 hours ago