ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ.
ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ರಾಜೀವ್ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ವೇಳೆ ರಾಜೀವ್ ಗೌರ ಪರ ವಾದ ಮಂಡಿಸಿದ ವಕೀಲ ವಿವೇಕ್ ರೆಡ್ಡಿ, ಫೋನ್ ಮೂಲಕ ಆಡಿದ ಮಾತಿಗೆ ಮಾಧ್ಯಮದಲ್ಲೇ ಕ್ಷಮೇ ಕೇಳಿದ್ದಾರೆ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದರು.
ಈ ವೇಳೆ ರಾಜೀವ್‌ಗೌಡಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ನಿಯಂತ್ರಣವಿಲ್ಲದ ನಾಲಿಗೆ ಎಲ್ಲವನ್ನೂ ಹಾಳು ಮಾಡಬಲ್ಲದು. ನೀವು ಕ್ಷಮೆ ಕೇಳಿದರೂ ಒಡೆದಿರುವುದು ಒಂದಾಗುವುದಿಲ್ಲ ಎಂದು ಕ್ಲಾಸ್ ತೆಗೆದುಕೊಂಡು, ರಾಜೀವ್ ಗೌಡ ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿತು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…