ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್‌ಗೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಇಂದು (ಜ.27) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮುಂದಿನ ಆದೇಶದವರೆಗೆ ವಿಚಾರಣೆ ನಡೆಸದಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಸಾವಿರಾರು ಕೋಟಿ ಅಕ್ರಮ ನಡೆದಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ ಮೊರೆ ಹೋಗಿದ್ದರು.