ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರಕ್ಕೆ ಮುಖಭಂಗವಾಗಿದೆ.
ಇದನ್ನು ಓದಿ: ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ
ರಾಜ್ಯ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ವಾದ ವಿವಾದ ಆಲಿಸಿ ಕೋರ್ಟ್ 120 ಅಡಿ ಚದರ ಜಾಗದಲ್ಲಿ ಜನೌಷಧಿ ಇಟ್ಟು ಕಡಿಮೆ ದರದಲ್ಲಿ ಔಷಧಿ ನೀಡಿದರೆ ನಿಮಗೆ ಏನು ಸಮಸ್ಯೆ? ಜನೌಷಧಿ ಬಗ್ಗೆ ಯಾರಾದರೂ ದೂರು ಕೊಟ್ಟಿದ್ದೀರಾ ಎಂದು ಸರ್ಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿತು.





