ಬೆಂಗಳೂರು: ಥಗ್‌ಲೈಫ್ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್ ಹಾಸನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಕಮಲ್ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು, ಥಗ್‌ಲೈಫ್ ಚಿತ್ರ ಬಿಡುಗಡೆಗೆ ತೊಂದರೆ ಆಗುತ್ತಿದೆ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಮಲ್ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ನಿಮ್ಮ ಹೇಳಿಕೆಗಳಿಂದ ನಟ ಶಿವರಾಜ್‌ಕುಮಾರ್ ಮುಜುಗರ ಅನುಭವಿಸುವಂತಾಗಿದೆ. ನೆಲ, ಜಲ ವಿಚಾರದಲ್ಲಿ ರಾಜೀ ಮಾತೆ ಇಲ್ಲ. ಕಮಲ್ ಹಾಸನ್ ಕ್ಷಮೆ ಕೇಳಿದರೆ ಮಾತ್ರ ಅರ್ಜಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ತೀವ್ರ ತರಾಟೆಗೆ ತೆಗೆದುಕೊಂಡರು.
ಇನ್ನು ಮುಂದುವರಿದು ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ನಾನು ಕೂಡ ಥಗ್‌ಲೈಫ್ ಚಿತ್ರ ನೋಡಬೇಕು ಅಂದುಕೊಂಡಿದ್ದೆ. ಆದರೆ ಇಂದಿನ ಪರಿಸ್ಥಿತಿಯಿಂದ ಇದು ಸಾಧ್ಯವಾಗುತ್ತಿಲ್ಲ. ಇವತ್ತಿನ ಪರಿಸ್ಥಿತಿಗೆ ಕಮಲ್ ಹಾಸನ್ ಅವರೇ ನೇರ ಹೊಣೆ. ನೀವು ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳದಿದ್ದರೆ ಕರ್ನಾಟಕ ಬಿಟ್ಟು ಬೇರೆ ಕಡೆ ನಿಮ್ಮ ಥಗ್‌ಲೈಫ್ ಸಿನಿಮಾ ರಿಲೀಸ್ ಮಾಡಿಕೊಳ್ಳಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.





