Mysore
23
clear sky

Social Media

ಬುಧವಾರ, 21 ಜನವರಿ 2026
Light
Dark

ಸಿಎಂ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ : ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಭಾಗಿ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕಬ್ಬುಗೆ ಪ್ರತಿ ಟನ್ ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ.

ಇದನ್ನೂ ಓದಿ:-ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ

ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌, ಸಚಿವ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಪೈಕಿ ಹಲವರು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಕೂಡ ಆಗಿದ್ದಾರೆ. ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ ಸಕ್ಕರೆ ಕಾರ್ಖಾನೆ ಮಾಲೀಕರೂ ಕೂಡ ಆಗಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕೂಡ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದಾರೆ.

ಕಬ್ಬುಗೆ ಪ್ರತಿ ಟನ್ʼಗೆ ಎಷ್ಟು ಬೆಲೆ ನೀಡಲು ಸಾಧ್ಯ ಎಂಬ ಬಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನೇರವಾಗಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ.

Tags:
error: Content is protected !!