ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಅವರ ಸಭೆ ಆರಂಭವಾಗಿದೆ. 38 ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿಯ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಕಬ್ಬುಗೆ ಪ್ರತಿ ಟನ್ ಗೆ 3,500 ರೂಪಾಯಿ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ.
ಇದನ್ನೂ ಓದಿ:-ಮುಂದುವರೆದ ಹುಲಿ ದಾಳಿ;ರೈತ ಸಾವು : ರೊಚ್ಚಿಗೆದ್ದ ಗ್ರಾಮಸ್ಥರಿಂದ ಆರ್‌ಎಫ್‌ಓ ಮೇಲೆ ಹಲ್ಲೆ
ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಪೈಕಿ ಹಲವರು ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಕೂಡ ಆಗಿದ್ದಾರೆ. ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ ಸಕ್ಕರೆ ಕಾರ್ಖಾನೆ ಮಾಲೀಕರೂ ಕೂಡ ಆಗಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕೂಡ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದಾರೆ.
ಕಬ್ಬುಗೆ ಪ್ರತಿ ಟನ್ʼಗೆ ಎಷ್ಟು ಬೆಲೆ ನೀಡಲು ಸಾಧ್ಯ ಎಂಬ ಬಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನೇರವಾಗಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…