ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್(JLRL) ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಖಾಸಗಿ ರೆಸಾರ್ಟ್ ಅತಿಥಿಗಳಿಗೆ ಕ್ಯಾಂಟರ್‌ಗಳನ್ನು ಒದಗಿಸಲಾಗುತ್ತಿದೆ. ಅದರೆ, ಜೆಎಲ್‌ಆರ್‌ಎಲ್ ಅತಿಥಿ ಗೃಹಗಳಿಗೆ ಸೂಕ್ತವಾದ ಜೀಪ್‌ಗಳನ್ನು ಒದಗಿಸಲಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ರೆಸಾರ್ಟ್‌ಗಳ ಸಂಘ 2022ರಲ್ಲಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜರೀಯಾ ಮತ್ತು ಕೆ.ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಸಫಾರಿ ವಾಹನ ಸೌಲಭ್ಯ ಒದಗಿಸುವುದು ಮತ್ತು ಇತರ ಸೌಲಭ್ಯಗಳ ಕುರಿತಂತೆ ಸರ್ಕಾರದೊಂದಿಗೆ ಖಾಸಗಿ ರೆಸಾರ್ಟ್‌ಗಳ ಸಂಘ ಒಪ್ಪಂದ ಮಾಡಿಕೊಂಡಿದೆ. ಆದರೆ, ಜೆಎಲ್‌ಆರ್‌ಎಲ್ ಒಪ್ಪಂದ ಉಲ್ಲಂಘಿಸುತ್ತಿದೆ. ನ್ಯಾಯಯುತ ಹಂಚಿಕೆ ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ವಿಸ್ತರಿಸಲು ನಿರ್ದೇಶನ ನೀಡಬೇಕು ಎಂದು ನ್ಯಾಯಾಪೀಠ ತೀರ್ಮಾನಿಸಬೇಕು ಎಂದು ಅರ್ಜಿದಾರರ ವಕೀಲರು ಮನವಿ ಮಾಡಿದರು.





