ರಾಜ್ಯ

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಸೌಲಭ್ಯದ ಮಾಹಿತಿ ಕೇಳಿದ ಹೈಕೋರ್ಟ್‌

ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್‌ ಲಾಡ್ಜ್‌ ಅಂಡ್‌ ರೆಸಾರ್ಟ್‌(JLRL) ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಖಾಸಗಿ ರೆಸಾರ್ಟ್‌ ಅತಿಥಿಗಳಿಗೆ ಕ್ಯಾಂಟರ್‌ಗಳನ್ನು ಒದಗಿಸಲಾಗುತ್ತಿದೆ. ಅದರೆ, ಜೆಎಲ್‌ಆರ್‌ಎಲ್‌ ಅತಿಥಿ ಗೃಹಗಳಿಗೆ ಸೂಕ್ತವಾದ ಜೀಪ್‌ಗಳನ್ನು ಒದಗಿಸಲಾಗುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ರೆಸಾರ್ಟ್‌ಗಳ ಸಂಘ 2022ರಲ್ಲಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ಅಂಜರೀಯಾ ಮತ್ತು ಕೆ.ವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಸಫಾರಿ ವಾಹನ ಸೌಲಭ್ಯ ಒದಗಿಸುವುದು ಮತ್ತು ಇತರ ಸೌಲಭ್ಯಗಳ ಕುರಿತಂತೆ ಸರ್ಕಾರದೊಂದಿಗೆ ಖಾಸಗಿ ರೆಸಾರ್ಟ್‌ಗಳ ಸಂಘ ಒಪ್ಪಂದ ಮಾಡಿಕೊಂಡಿದೆ. ಆದರೆ, ಜೆಎಲ್‌ಆರ್‌ಎಲ್‌ ಒಪ್ಪಂದ ಉಲ್ಲಂಘಿಸುತ್ತಿದೆ. ನ್ಯಾಯಯುತ ಹಂಚಿಕೆ ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ವಿಸ್ತರಿಸಲು ನಿರ್ದೇಶನ ನೀಡಬೇಕು ಎಂದು ನ್ಯಾಯಾಪೀಠ ತೀರ್ಮಾನಿಸಬೇಕು ಎಂದು ಅರ್ಜಿದಾರರ ವಕೀಲರು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago