ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ.
ಎ೫ ಅಮಿತ್ ದಿಗ್ವೇಕರ್, ಎ೧೭ ಕೆ.ಟಿ.ನವೀನ್ ಕುಮಾರ್, ಎ೭ ಹೆಚ್ ಎಲ್ ಸುರೇಶ್ ಗೆ ಜಾಮೀನು ನೀಡಿ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿಂದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಆರೋಪಿಗಳ ಪರವಾಗಿ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದ ಮಂಡಿಸಿ, ಕಳೆದ ೬ ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೆ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲ ಎಂಬ ತೀರ್ಪು ಇದೆ ಎಂದು ಹೇಳಿದರು. ವಾದ ಆಲಿಸಿದ ಬಳಿಕ ನ್ಯಾಯಪೀಠ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಎ೧೧ ಮೋಹನ್ ನಾಯಕ್ ಗೆ ಜಾಮೀನು ಮಂಜೂರು ಆಗಿತ್ತು.
೨೦೧೭ ಸೆಪ್ಟೆಂಬರ್ ೫ ರಂದು ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ ೧೮ ಆರೋಪಿಗಳು ಬಂಧನಕ್ಕೊಳಗಾಗಿದ್ದು, ೧೨೦೦ ಪುರಾವೆ ಹಾಗೂ ೫೦೦ ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…