Mysore
24
overcast clouds

Social Media

ಶನಿವಾರ, 17 ಜನವರಿ 2026
Light
Dark

ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ ನೀಡಿದೆ.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್‌ ಅವರು ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ನೀಡಲಾಗಿದೆ.

ಮುಂದಿನ ವಿಚಾರಣೆ ದಿನಾಂಕದವರೆಗೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬಾರದು. ಕೇಂದ್ರ ಸರ್ಕಾರದ ಯೋಜನೆಯಡಿ ಯಾವ ರೀತಿಯ ಕಾಮಗಾರಿಗಳಿಗೆ ಅವಕಾಶವಿದೆ. ಆ ಯೋಜನೆ ಹಾಗೂ ಅದರ ಜಾರಿ ವಿಧಾನದ ಬಗ್ಗೆ ಮಾಹಿತಿ ನೀಡಬೇಕು ಎಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದ್ದು, ವಿಚಾರಣೆಯನ್ನು ಫೆಬ್ರವರಿ.13ಕ್ಕೆ ಮುಂದೂಡಿಕೆ ಮಾಡಲಾಗಿದೆ.

Tags:
error: Content is protected !!