ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆ ನಡೆಸಲು ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ ಆಗಿದ್ದು, ಶಾಸಕಾಂಗ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆಯನ್ನು ಸಮ್ಮತಿಸಿ ತನಿಖೆ ನಡೆಸಲು ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಆದೇಶದಿಂದ ಸಿದ್ದರಾಮಯ್ಯಗೆ ಹಿನ್ನಡೆಯಾಗಿದ್ದು, ನಾಳೆ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಇದರಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ.
ಇನ್ನು ಸಿದ್ದರಾಮಯ್ಯ ಅವರು, ಗುರುವಾರ ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಹೇಗೆ ಉತ್ತರಿಸಬೇಕೆಂಬುವುದರ ಬಗ್ಗೆ ಕುರಿತು ಚರ್ಚಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.