ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.
ಏನಿದು ಪ್ರಕರಣ?
ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಅವರು ವಿರಾಜಪೇಟೆಯಲ್ಲಿ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್ ಅನ್ನು 2016ರಲ್ಲಿ ಪುತ್ರ ಹಾಗೂ ಮೊಮ್ಮಗಳಿಗೆ ʼಗಿಫ್ಟ್ ಡೀಡ್ʼ ಅಡಿಯಲ್ಲಿ ಉಡುಗೊರೆಯನ್ನಾಗಿ ನೀಡಿದ್ದರು. ಈ ಸಂದರ್ಭದಲ್ಲಿ ಪುತ್ರ ಹಾಗೂ ಮೊಮ್ಮಗಳು ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕವಾಗಿ ತಲಾ 7 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದರು. ಅದರಂತೆ 2016ರಿಂದ 2019ರವರೆಗೆ ಇಬ್ಬರೂ ಸಹ ಹಣವನ್ನು ನೀಡಿದ್ದರು.
ಬಳಿಕ ಪುತ್ರ ಹಾಗೂ ಮೊಮ್ಮಗಳು ಯಾವುದೇ ಹಣ ನೀಡಿರಲಿಲ್ಲ. ಅಲ್ಲದೇ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವ ವಿಷಯ ತಿಳಿದ ಅಪ್ಪರಂಡ ಶಾಂತಿ ಬೋಪಣ್ಣ 2019ರಲ್ಲಿ ಗಿಫ್ಟ್ ಡೀಡ್ ರದ್ದುಪಡಿಸುವಂತೆ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆ 2007ʼರ ಅಡಿಯಲ್ಲಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಈ ಮನವಿಯ ವಿಚಾರಣೆ ನಡೆಸಿದ್ದ ಉಪವಿಭಾಗಾಧಿಕಾರಿ 2021ರ ಸೆಪ್ಟೆಂಬರ್ 15ರಂದು ಗಿಫ್ಟ್ ಡೀಡ್ ಅನ್ನು ರದ್ದುಮಾಡಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಪುತ್ರ ಹಾಗೂ ಮೊಮ್ಮಗಳು ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದರು. 2023ರ ಮಾರ್ಚ್ 23ರಂದು ಉಪವಿಭಾಗಾಧಿಕಾರಿಯ ಆದೇಶವನ್ನು ರದ್ದುಗೊಳಿಸಿದ ಜಿಲ್ಲಾಧಿಕಾರಿ ಪುತ್ರ ಹಾಗೂ ಮೊಮ್ಮಗಳ ಆಸ್ತಿ ಹಕ್ಕನ್ನು ಮರುಸ್ಥಾಪಿಸುವಂತೆ ಆದೇಶ ಹೊರಡಿಸಿದ್ದರು. ಹಾಗೆಯೇ ವೃದ್ಧತಾಯಿಯ ಜೀವನಾಂಶವನ್ನು ಜೀವಿತಾವಧಿವರೆಗೆ ಪಾವತಿಸುವಂತೆ ಪುತ್ರ ಹಾಗೂ ಮೊಮ್ಮಗಳಿಗೆ ನಿರ್ದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿದ್ದ ವೃದ್ಧೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…