ರಾಜ್ಯ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ಮುಖ್ಯಾಂಶಗಳು

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಇದನ್ನು ಓದಿ: ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ: ಮಾಜಿ ಸಿಎಂ ಯಡಿಯೂರಪ್ಪ

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ.ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್.8ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

ಇತ್ತೀಚೆಗೆ ಅಧಿಕಾರ ಹಸ್ತಾಂತರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ, ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ. ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

35 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

1 hour ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

1 hour ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

2 hours ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago