Mysore
18
few clouds

Social Media

ಬುಧವಾರ, 28 ಜನವರಿ 2026
Light
Dark

SSLC ಪರೀಕ್ಷೆ ವೇಳೆ ಹಿಜಾಬ್‌ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು?

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹಿಜಾಬ್ ಧರಿಸಿದ ಹೆಣ್ಣುಮಕ್ಕಳಿಗೆ ಅವಕಾಶ ನೀಡಬೇಕೋ ಎಂಬ ವಿಚಾರವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಕುರಿತಾಗಿ ನಾವು ಸುದೀರ್ಘವಾಗಿ ಚರ್ಚೆ ಮಾಡುತ್ತೇವೆ. ನಮಗೆ ಇನ್ನೂ ಒಂದು ತಿಂಗಳು ಕಾಲಾವಕಾಶ ಇದೆ. ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶವನ್ನು ನೀಡಲಿರಲಿಲ್ಲ. ನಂತರದಲ್ಲಿ ಹೈಕೋರ್ಟ್ ಕೂಡಾ ಶಿಕ್ಷಣ ಇಲಾಖೆಯ ನಿಲುವಿಗೆ ಪರವಾದ ತೀರ್ಪು ನೀಡಿತ್ತು. ಆದರೆ ಇದೀಗ ಮತ್ತೊಮ್ಮೆ ಈ ವಿಚಾರ ಮುನ್ನಲೆಗೆ ಬಂದಿದೆ.

Tags:
error: Content is protected !!