ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹಿಜಾಬ್ ಧರಿಸಿದ ಹೆಣ್ಣುಮಕ್ಕಳಿಗೆ ಅವಕಾಶ ನೀಡಬೇಕೋ ಎಂಬ ವಿಚಾರವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಕುರಿತಾಗಿ ನಾವು ಸುದೀರ್ಘವಾಗಿ ಚರ್ಚೆ ಮಾಡುತ್ತೇವೆ. ನಮಗೆ ಇನ್ನೂ ಒಂದು ತಿಂಗಳು ಕಾಲಾವಕಾಶ ಇದೆ. ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ವಿವಾದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶವನ್ನು ನೀಡಲಿರಲಿಲ್ಲ. ನಂತರದಲ್ಲಿ ಹೈಕೋರ್ಟ್ ಕೂಡಾ ಶಿಕ್ಷಣ ಇಲಾಖೆಯ ನಿಲುವಿಗೆ ಪರವಾದ ತೀರ್ಪು ನೀಡಿತ್ತು. ಆದರೆ ಇದೀಗ ಮತ್ತೊಮ್ಮೆ ಈ ವಿಚಾರ ಮುನ್ನಲೆಗೆ ಬಂದಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…