ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಾಘವೇಂದ್ರ, ರಾಜು, ಶಬ್ಬೀರ್ ಎಂದು ಗುರುತಿಸಲಾಗಿದೆ. ಘಟನೆ ಗುರುವಾರ ಸಂಜೆ ಸಂಭವಿಸಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹಗಳನ್ನು ರಕ್ಷಣಾ ತಂಡಗಳು ಪತ್ತೆ ಮಾಡಿವೆ. ಮೃತರಲ್ಲಿ ಒಬ್ಬರು ಕಾಮಗಾರಿ ಮೇಲ್ವಿಚಾರಕರೂ ಸೇರಿದ್ದಾರೆ.
ಘಟನೆಯಲ್ಲಿ ಇನ್ನೂ ನಾಲ್ಕು ಜನರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಪತ್ತೆ ಮಾಡಿ, ಶಿವಮೊಗ್ಗದ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಹುಲಿಕಲ್ ಘಾಟ್ ಪ್ರದೇಶವು ಗುಡ್ಡಗಾಡುಗಳ ನಡುವಿನ ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿದ್ದು, ಭೂಕುಸಿತಕ್ಕೆ ತುತ್ತಾಗುವ ಸಂಭಾವ್ಯ ಪ್ರದೇಶವಾಗಿದೆ. ಕಾಮಗಾರಿ ವೇಳೆ ದಿಢೀರ್ ಗುಡ್ಡ ಕುಸಿತ ಸಂಭವಿಸಿದ್ದು, ಏಳು ಜನರು ಮಣ್ಣಿನಡಿ ಸಿಲುಕಿದ್ದರಲ್ಲಿ ನಾಲ್ಕು ಜನರನ್ನು ರಕ್ಷಿಸಲಾಗಿದೆ.
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…