ರಾಜ್ಯ

ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿತ: ಏಳು ಮಂದಿ ದುರ್ಮರಣ

ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜೋರಾದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಏಳು ಮಂದಿ ಸಾವಿಗೀಡಾಗಿದ್ದಾರೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮಣ್ಣಿನಡಿ ಸಿಲುಕಿಕೊಂಡಿರುವ 9 ಜನರಲ್ಲಿ ಒಂದೇ ಕುಟುಂಬ 7 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಗುಡ್ಡ ಕುಸಿತದಿಂದ ಏಳು ಮಂದಿ ಮೃತರಾಗಿದ್ದು, ಇಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಇಬ್ಬರ ರಕ್ಷಣೆಗಾಗಿ ಎನ್‌ಡಿಆರ್‌ಎಫ್‌ ತಂಡ ಕಾರ್ಯಪ್ರವೃತ್ತರಾಗಿದ್ದಾರೆ. ಗುಡ್ಡ ಕುಸಿತಕ್ಕೆ ಸಿಲುಕಿರುವವರನ್ನು ರಕ್ಷಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago