ಚಿಕ್ಕೋಡಿ: ಹಿಂದೂ ದೇವಾಲಯಗಳನ್ನು ನಾಶ ಮಾಡಿ ಮಸೀದಿ ನಿರ್ಮಿಸಿರುವುದನ್ನು ತೆಗೆದುಕೊಳ್ಳಿ ಇಲ್ಲವಾದರೇ ಹಿಂದೂ ಸಮಾಜ ಮಸೀದಿಗಳನ್ನು ಒಡೆದುಹಾಕುತ್ತದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ನಗರದಲ್ಲಿಂದು ಮೋದಿ ಗೆಲ್ಲಿಸಿ-ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್ ಆದೇಶವನ್ನೇ ತಿರಸ್ಕರಿಸಿ ಹಿಜಾಬ್ ನಿಷೇಧ ಬಗ್ಗೆ ಮಾತನಾಡುತ್ತಾರೆ. ಅವರು ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬಂದರೆ, ನಮ್ಮ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಚಿವ ಪ್ರಯಾಂಕ್ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿರುವ ಕುರಿತು, ಪ್ರಧಾನಿ ಮೋದಿ ಸೂರ್ಯ ಇದ್ದಾಗೆ, ಸೂರ್ಯನಿಗೆ ಉಗಿದರೇ ಅದು ಅವರಿಗೆ ಮರಳಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಜನವರಿ ೨೨ ರಂದು ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ. ಕಾಂಗ್ರೆಸ್ ನಾಯಕರು ಹಿಂದುಗಳ ನಡುವೆ ಬೆಂಕಿ ಹಚ್ಚಿದವರು. ಆದರೆ ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದರು. ಕಾಂಗ್ರೆಸ್ ಅಧಿಕಾರದ ಆಸೆಯಿಂದ ದೇಶ ತುಂಡು-ತುಂಡಾಯಿತು. ದೇಶ ಲೂಟಿ ಮಾಡಿದವರಿಂದ ನಮ್ಮ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಈಗ ರಾಮ ಮಂದಿರ ಉದ್ಘಾಟನೆಗೆ ಪಾಸ್‌ಗಳನ್ನು ಶೋಆಫ್ ಮಾಡಲು ಕೇಳುತ್ತಿದ್ದಾರೆ ಎಂದು ಹರಿಹಾಯ್ದರು.
ಸಿಎಂ ಸಿದ್ದರಾಮಯ್ಯ ೧ ಸಾವಿರ ಕೋಟಿಯನ್ನು ಮುಸ್ಲೀಂರಿಗೆ ಅವರ ಅಪ್ಪನ ಮನೆಯ ದುಡ್ಡಿಂದ ಕೊಡ್ತಾರಾ?, ಹಮ್ ದೋ ಹಮಾರೆ ದೋ ಎಂದು ಮೋದಿ ಕಾನೂನು ತಂದಿದ್ದಾರೆ. ಆದರೆ ಮುಸ್ಲೀಮರು ಹಮ್ ಪಾಂಚ್ ಹಮಾರಾ ಪಚ್ಚಿಸ್ ಎನ್ನುತ್ತಾರೆ. ಇವರ ಆಟ ಮೋದಿ ಕಾಲಾವಧಿಯಲ್ಲಿ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಅಯೋಧ್ಯೆ ರಾಮ ಮಂದಿರ ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಮಥುರಾ, ಕಾಶಿ ದೇವಾಲಯಗಳ ಸರ್ವೇ ಕಾರ್ಯ ನಡೆಯುತ್ತಿದೆ. ಶೀಘ್ರ ಅಲ್ಲಿ ಕಾಶಿ ವಿಶ್ವನಾಥ, ಮಥುರಾದಲ್ಲಿ ಕೃಷ್ಣ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…
ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ…