ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಅನುಮತಿಸುವ ಸುಳಿವವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ’ ಕುನ್ಹಾ ಅವರ ಆಯೋಗದ ವರದಿ ಆಧರಿಸಿ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನು ಪರಿಶೀಲಿಸಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅನುಮತಿ ನೀಡಲಾಗುವುದು ಎಂದರು.

ನ್ಯಾಯಮೂರ್ತಿಗಳ ವರದಿ ಆಧರಿಸಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಎಂದು ಮೂರು ಭಾಗ ಮಾಡಲಾಗಿದೆ. ಮೊದಲ ಹಂತದಲ್ಲಿ ಕಿರು ಅವಧಿಯ ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಪರಿಶೀಲಿಸಲು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ಈಗಾಗಲೇ ಎರಡು ಬಾರಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ದೀರ್ಘಾವಽಯ ಯೋಜನೆಗಳನ್ನೂ ಈಗಲೇ ಈಡೇರಿಸಿ ಎಂದರೆ ಅದು ಕಷ್ಟ ಸಾಧ್ಯ. ಅಲ್ಪಕಾಲಿಕ ಕ್ರಮಗಳನ್ನು ಕೈಗೊಂಡಿದ್ದರೆ ಐಪಿಎಲ್ ಪಂದ್ಯಾವಳಿಗಳಿಗೆ ಅವಕಾಶ ನೀಡುವುದಾಗಿ ತಿಳಿಸಿದರು.

ಬಂದೂಕು ಹಿಡಿದು ನೃತ್ಯ ಮಾಡಿರುವ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಯಾವುದೇ ಪಕ್ಷದವರಾಗಿದ್ದರೂ ಅದು ನಂತರದ ವಿಷಯ. ಕಾನೂನು ಬಾಹಿರ ಕೃತ್ಯ ಮಾಡಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಪ್ರಿಯಾಂಕ್ ಖರ್ಗೆ, ಅಫ್ಜಲ್‌ಪುರ ಕ್ಷೇತ್ರದ ಶಾಸಕರ ಆಪ್ತರು ಎಂಬ ಕಾರಣಕ್ಕೆ ವಿನಾಯಿತಿ ನೀಡುವುದಿಲ್ಲ. ತಮ್ಮ ಆಪ್ತರಿಗೆ ಯಾವ ಸಚಿವರು, ಶಾಸಕರೂ ಕಾನೂನು ಉಲ್ಲಂಘನೆ ಮಾಡಿ ಎಂದು ಹೇಳಿರುವುದಿಲ್ಲ ಎಂದರು.

ಬೈರತಿ ಬಸವರಾಜು ಬಂಧನಕ್ಕೆ ಕ್ರಮ
ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಅವರ ಅರ್ಜಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನಿ ನಿರಾಕರಿಸಿ ಎರಡು ದಿನಗಳ ಹಿಂದೆಯಷ್ಟೆ ಆದೇಶ ನೀಡಿದೆ. ಇನ್ನೂ ಮುಂದೆ ಅವರನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತದೆ. ಅವರಾಗಿಯೇ ಬಂದು ಶರಣಾದರೆ ಒಳ್ಳೆಯದು ಇಲ್ಲವಾದರೆ, ಪೊಲೀಸರು ಬಂಧಿಸಿ ಕರೆ ತರುತ್ತಾರೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago