Mysore
22
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ದೆ ಮಂಪರಿನಲ್ಲಿ ವಾಹನ ಚಾಲನ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೆ ಒಳ್ಳೆಯದು. ಈ ನಿದ್ದೆ ಮಂಪರಿನಲ್ಲಿ ಆಗುವ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನು ನಿಲ್ಲಿಸಿ ವಿಶ್ರಾಂತಿ ಮಾಡಬೇಕು. ಅದರಲ್ಲೂ ಮಧ್ಯರಾತ್ರಿ 12 ರಿಂದ 4 ಗಂಟೆಗಳ ಕಾಲ ನ್ಯಾಷನಲ್‌ ಹೈವೇಗಳ ಬೇಸ್‌ಗಳಲ್ಲಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್‌ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Tags:
error: Content is protected !!