Mysore
22
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.

ರೇವಣ್ಣ ಪುತ್ರ ಶಶಾಂಕ್‌ ಫಾರ್ಚೂನರ್‌ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್‌ ಸಾವನ್ನಪ್ಪಿದ್ದಾರೆ. ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಟೋಲ್‌ ನೂರು ಮೀಟರ್‌ ಬಳಿ ಕಾರು ಗುದ್ದಿದೆ.

ಇದನ್ನು ಓದಿ: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಕಳೆದ ತಡರಾತ್ರಿ 10.30ರ ಸುಮಾರಿಗೆ ಅಪಘಾತ ಎಸಗಿದ ಬಳಿಕ ಶಶಾಂಕ್‌ ಕಾರಿನೊಂದಿಗೆ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಸ್ಥಳೀಯರು 5 ಕಿ.ಮೀ ಹಿಂಬಾಲಿಸಿ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.

ಈ ವೇಳೆ ಕಾರಿನಿಂದ ಇಳಿದ ಬಳಿಕ ಶಶಾಂಕ್‌ ನಾನು ಯಾರು ಗೊತ್ತಾ? ಎಚ್.ಎಂ.ರೇವಣ್ಣ ಪುತ್ರ ಎಂದು ಅವಾಜ್‌ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್‌ ಪರಾರಿಯಾಗಿದ್ದಾರೆ.

ತಡರಾತ್ರಿ ಫಾರ್ಚೂನರ್‌ ಕಾರನ್ನು ಕುದೂರು ಪೊಲೀಸ್‌ ಠಾಣೆಗೆ ತರಲಾಗಿದೆ.

Tags:
error: Content is protected !!