ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.
ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್ ಸಾವನ್ನಪ್ಪಿದ್ದಾರೆ. ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಟೋಲ್ ನೂರು ಮೀಟರ್ ಬಳಿ ಕಾರು ಗುದ್ದಿದೆ.
ಇದನ್ನು ಓದಿ: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ
ಕಳೆದ ತಡರಾತ್ರಿ 10.30ರ ಸುಮಾರಿಗೆ ಅಪಘಾತ ಎಸಗಿದ ಬಳಿಕ ಶಶಾಂಕ್ ಕಾರಿನೊಂದಿಗೆ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಸ್ಥಳೀಯರು 5 ಕಿ.ಮೀ ಹಿಂಬಾಲಿಸಿ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
ಈ ವೇಳೆ ಕಾರಿನಿಂದ ಇಳಿದ ಬಳಿಕ ಶಶಾಂಕ್ ನಾನು ಯಾರು ಗೊತ್ತಾ? ಎಚ್.ಎಂ.ರೇವಣ್ಣ ಪುತ್ರ ಎಂದು ಅವಾಜ್ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್ ಪರಾರಿಯಾಗಿದ್ದಾರೆ.
ತಡರಾತ್ರಿ ಫಾರ್ಚೂನರ್ ಕಾರನ್ನು ಕುದೂರು ಪೊಲೀಸ್ ಠಾಣೆಗೆ ತರಲಾಗಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…