ಬೆಂಗಳೂರು: ಎಚ್‌ಎಂಪಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಮಾಡಬೇಡಿ ಎಂದು ಜನರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್‌ಎಂಪಿವಿ ಬಗ್ಗೆ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಈ ವೈರಸ್ ಟೆಸ್ಟ್ ಮಾಡಿಸಿಕೊಳ್ಳಲು ಬಂದವರಿಗೆ ದುಂದು ವೆಚ್ಚ ಹಾಕುವ ಅವಶ್ಯಕತೆಯಿಲ್ಲ. ಈ ವೈರಸ್‌ನಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಅಲ್ಲದೇ ಜನರು ಅನಗತ್ಯವಾಗಿ ತಪಾಸಣೆ ಮಾಡಿಸಿಕೊಳ್ಳುವ ಅವಶ್ಯಕತೆ ಕೂಡ ಇಲ್ಲ. ಜನರು ಭಯಪಡುವ ಅವಶ್ಯಕತೆ ಇಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಚ್‌ಎಂಪಿವಿ ಬಗ್ಗೆ ಯಾರೂ ಕೂಡ ನಿರ್ಲಕ್ಷ್ಯ ಮಾಡಬಾರದು. ವೈರಸ್ ಬಗ್ಗೆ ಮುಂಜಾಗ್ರತೆ ವಹಿಸೋದು ಅವಶ್ಯಕವಾಗಿದೆ. ಮಕ್ಕಳು ಹಾಗೂ ವೃದ್ಧರು ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು.