ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್‌ಎಂಪಿವಿ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್‌ಲೈನ್ಸ್ ಅನ್ನು ಬಿಡುಗಡೆ ಮಾಡಲಾಗಿದೆ.
ಈ ಚೀನಿ ವೈರಸ್ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಮಧ್ಯಾಹ್ನದ ವೇಳೆಗೆ ತುರ್ತು ಸಭೆ ಕರೆದಿದ್ದಾರೆ. ಅಲ್ಲದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಎಚ್‌ಓಗಳಿಂದ ಆರೋಗ್ಯ ಇಲಾಕೆ ಮಾಹಿತಿ ನೀಡುವಂತೆ ಸೂಚಿಸಿದೆ. ಜೊತೆಗೆ ಪ್ರತಿಯೊಂದು ಡೇಟಾವನ್ನು ಪತ್ತೆ ಹಚ್ಚಬೇಕು. ಒಂದು ವೇಳೆ ವೈರಸ್ ದೃಢಪಟ್ಟರೆ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಬೇಕು ಎಂದು ಆದೇಶಿದೆ.
ವೈರಸ್ ತಡೆಗಟ್ಟಲು ಏನು ಮಾಡಬೇಕು?
1.ಕೆಮ್ಮುವಾಗ ಅಥವಾ ಸೀನುವಾಗ, ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು.
2.ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ಹೆಚ್ಚಾಗಿ ತೊಳೆಯಬೇಕು.
3.ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಬೇಕು.
4.ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು.
5.ಮನೆಯಲ್ಲಿಯೇ ಇರಬೇಕು ಹಾಗೂ ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಬೇಕು.
6. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು.
ಏನು ಮಾಡಬಾರದು?
1. ಟಿಶ್ಯೂ ಪೇಪರ್ ಹಾಗೂ ಕೈ ಕರ್ಚೀಫ್ ಮರುಬಳಕೆ ಬಾರದು
2.ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳಬಾರದು.
3.ಕಣ್ಣು, ಮೂಗು ಹಾಗೂ ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸಬಾರದು.
4.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.
5.ವೈದ್ಯರನ್ನು ಸಂಪರ್ಕಿಸದೆ ಔಷಧಿ ಸೇವಿಸಬಾರದು.
ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್…
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…
ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…
ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…
ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…
ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…