Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಗೆ ಸಚಿವ ಈಶ್ವರ್‌ ಖಂಡ್ರೆ ಭೇಟಿ

ಬೆಂಗಳೂರು: ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ.

ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಕ್ರಮ ನಡೆಸಿರುವ ಆರೋಪಿಗಳ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಸೂಚನೆ ನೀಡಿದರು.

ಇನ್ನು ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

 

Tags: