ರಾಜ್ಯ

ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ: ಪರಮೇಶ್ವರ್‌

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಹನುಮಧ್ವಜ ಹಾರಿಸಿದವರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರಿ ಆವರಣದಲ್ಲಿ, ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಈ ಬಗ್ಗೆ ಪೊಲೀಸರು ಕೈಗೊಂಡಿರುವ ಕ್ರಮ ಸರಿಯಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಇದೇ ಅವರಿಗೂ ನಮಗೂ ಇರುವ ವ್ಯತ್ಯಾಸ ಎಂದರು.

ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

2 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

9 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

9 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

9 hours ago