ರಾಜ್ಯ

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿದೆ.

ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಮನವಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಆದರೆ ಮತ್ತೊಮ್ಮೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಜ್ಯ ಸಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್), ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಂಡಳಿ ಪರೀಕ್ಷೆಗಳು ಇತ್ಯಾದಿಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜೂ.೩೦ರಿಂದ ಅನ್ವಯವಾಗುವಂತೆ ಹೆಚ್ಚುವರಿ ಮೂರು ತಿಂಗಳ ಸಮಯ ನೀಡಬೇಕು ಎಂದು ಮನವಿ ಮಾಡಿದ್ದವು.

ಜೂನ್ ೩೦ರೊಳಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ನಿರ್ದೇಶಿಸಿದ್ದ ಸರ್ವೋಚ್ಚ ನ್ಯಾಯಾಲಯದ ಜನವರಿ ೧೨ರ ಆದೇಶವನ್ನು ಮಾರ್ಪಡಿಸುವಂತೆ ಕೋರಿದ್ದವು. ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗಳನ್ನು ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ತನ್ನ ಅರ್ಜಯಲ್ಲಿ ತಿಳಿಸಿತ್ತು.

ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಇದಕ್ಕಾಗಿ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ದರಿಂದ ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಬ್ಬಂದಿಯ ಕೊರತೆಯಾಗುತ್ತಿದೆ. ಆದ್ದರಿಂದ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕವನ್ನು ಎರಡು-ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಕೋರಿದರು.

ಸರ್ಕಾರದ ಪರ ವಕೀಲರ ವಾದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸಹಮತ ವ್ಯಕ್ತಪಡಿಸಿದರು. ಇದಕ್ಕೆ ಆಕ್ಷೇಪಿಸಿದ ಮೂಲ ಅರ್ಜಿದಾರರ ಪರ ವಕೀಲರು, ಹಲವು ವರ್ಷಗಳಿಂದ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ಜೂನ್ ಅಂತ್ಯದ ವೇಳೆಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿತ್ತು. ಇದೀಗ ಮತ್ತೆ ಕಾಲಾವಕಾಶ ಕೋರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠವನ್ನು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಆಗಸ್ಟ್ ೩೧ರ ಅಂತ್ಯದ ವೇಳೆಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಗಡುವು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿತು.

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

17 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

17 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

17 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

18 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

18 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

18 hours ago