ಮಂಗಳೂರು : ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದ್ದು, ಜನರ ಜೀವನ ಅಸ್ವವ್ಯಸ್ತವಾಗಿದೆ.
ನಿನ್ನೆಯಿಂದಲೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಅಂಗನವಾಡಿ ಸೇರಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.