ರಾಜ್ಯ

ಖಾಸಗಿ ಕಾರ್ಯಕ್ರಮಗಳಿಗೆ ಅಂಕುಶ ; ತಕ್ಷಣದಿಂದಲೇ ಆದೇಶ ಜಾರಿಗೊಳಿಸಿದ ಗೃಹ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶನಿವಾರ ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿತ್ತು. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ.

ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸುವವರೆಗೆ, ಉಲ್ಲೇಖಿತ ಆದೇಶದಲ್ಲಿ ನಮೂದಿಸಿರುವ ಸಕ್ಷಮ ಪ್ರಾಧಿಕಾರವು ಚಾಲ್ತಿಯಲ್ಲಿರುವ ತಮ್ಮ ಇಲಾಖೆಯ ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸದರಿ ಆದೇಶದಲ್ಲಿ ಉಲ್ಲೇಖಿಸಿರುವ ಸಿದ್ಧಾಂತಗಳನ್ನು ಪಾಲಿಸಿ ನ್ಯಾಯಿಕ ಆದೇಶವನ್ನು ಹೊರಡಿಸಲು ಕ್ರಮಕೈಗೊಳ್ಳುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಹೊರಡಿಸಲಾದ ಮಾರ್ಗಸೂಚಿಯ ಪ್ರತಿಯನ್ನು ಒಳಾಡಳಿತ ಇಲಾಖೆಗೆ ಕಳುಹಿಸುವಂತೆ ತಿಳಿಸಿದ್ದಾರೆ.

ಯಾರಿಂದ ಅನುಮತಿ ಪಡೆಯಬೇಕು?
* ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ – ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯಬೇಕು.

* ಉದ್ಯಾನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು – ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ಸ್ಥಳಗಳು – ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ಪೊಲೀಸ್ ಅಧೀಕ್ಷಕರಿಂದ ಅನುಮತಿ ಪಡೆಬೇಕು.

ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ.

ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪುಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್‌ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ.

ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ | ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ.

ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧೈಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು.

ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲಾಗುವ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅವುಗಳ ಎದುರಿಗೆ ನಮೂದಿಸಲಾದ ಮಾಲಿಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವುದನ್ನು ಪರಿಶೀಲಸತಕ್ಕದ್ದು.

ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.

ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ ಸ್ಥಳಗಳು ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರು.

ಮೇಲೆ ನಮೂದಿಸಿದ ಇಲಾಖೆ, ಸಕ್ಷಮ ಪ್ರಾಧಿಕಾರಗಳು ಇಂತಹ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಎಚ್ಚರಿಕೆ ವಹಿಸಲು ಅನುವಾಗುವಂತೆ ಸೂಕ್ತ, ವಿವರವಾದ ಮಾರ್ಗಸೂಚಿಯನ್ನು ಆಯಾ ಇಲಾಖೆಗಳು ಹೊರಡಿಸತಕ್ಕದ್ದು.

ಸಚಿವ ಸಂಪುಟವು ಕೈಗೊಂಡಿರುವ ಮೇಲಿನ ನಿರ್ಣಯದಂತೆ ಒಳಾಡಳಿತ ಇಲಾಖೆಯಿಂದ ಹೊರಡಿಸಲಾಗಿರುವ ಉಲ್ಲೇಖಿತ ಆದೇಶವನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಆದೇಶದಲ್ಲಿ ತಿಳಿಸಿರುವಂತೆ, ಆಯಾ ಇಲಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ, ಸೂಕ್ತ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

10 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

11 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

13 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

13 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

17 hours ago