ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಅವರು ನಾಳೆಗೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸೂಚನೆ ಮೇರೆಗೆ ನಾಳೆ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ.
ಈ ಬಗ್ಗೆ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಅವರೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮುಂದಿನ ದಿನಗಳಲ್ಲಿ ಸಭೆಯ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಡಿನ್ನರ್ ಮೀಟಿಂಗ್ ಹವಾ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಬಿಜೆಪಿ ನಾಯಕರಿಗೆ ಒಳ್ಳೆಯ ಚರ್ಚೆಯ ವಿಷಯ ಸಿಕ್ಕಂತಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆದಿತ್ತು
ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೂಡ ತಮ್ಮ ಮನೆಯಲ್ಲಿ ಡಿನ್ನರ್ ಮೀಟಿಂಗ್ ಏರ್ಪಾಡು ಮಾಡಿದ್ದರು. ಆದರೆ ಈಗ ಹೈಕಮಾಂಡ್ ಸೂಚನೆ ಮೇರೆಗೆ ಡಿನ್ನರ್ ಮೀಟಿಂಗ್ ರದ್ದು ಮಾಡಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ನಡುವೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೊಂಚ ಬಿರುಕು ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…