Mysore
24
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಖರ್ಗೆ ಅವರೊಂದಿಗೆ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ಒಮ್ಮೆ ಹೇಳಿದರೆ, ಕೆಲವೇ ನಿಮಿಷಗಳಲ್ಲಿ ತಾವು ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ. ನನ್ನ ಮತ್ತು ಅವರ ಕುಟುಂಬದ ನಡುವೆ ರಾಜಕೀಯ ಮೀರಿದ ಸಂಬಂಧವಿದೆ. ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಕೆಲ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಕಲಬುರಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಖರ್ಗೆಯವರ ಗಮನಕ್ಕೂ ತಂದಿದ್ದೇನೆ. ಅದನ್ನು ಹೊರತುಪಡಿಸಿ ರಾಜ್ಯ ರಾಜಕೀಯದ ವಿಚಾರವಾಗಿ ಯಾವುದೇ ಚರ್ಚೆಗಳನ್ನು ಮಾಡಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದಿದ್ದಾರೆ.

Tags:
error: Content is protected !!