ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಖರ್ಗೆ ಅವರೊಂದಿಗೆ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ಒಮ್ಮೆ ಹೇಳಿದರೆ, ಕೆಲವೇ ನಿಮಿಷಗಳಲ್ಲಿ ತಾವು ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ. ನನ್ನ ಮತ್ತು ಅವರ ಕುಟುಂಬದ ನಡುವೆ ರಾಜಕೀಯ ಮೀರಿದ ಸಂಬಂಧವಿದೆ. ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಕೆಲ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಕಲಬುರಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಖರ್ಗೆಯವರ ಗಮನಕ್ಕೂ ತಂದಿದ್ದೇನೆ. ಅದನ್ನು ಹೊರತುಪಡಿಸಿ ರಾಜ್ಯ ರಾಜಕೀಯದ ವಿಚಾರವಾಗಿ ಯಾವುದೇ ಚರ್ಚೆಗಳನ್ನು ಮಾಡಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…