ರಾಜ್ಯ

ದೆಹಲಿಯಲ್ಲಿ ಮುಡಾ ಹಗರಣ ಚರ್ಚೆ ಮಾಡಿದ್ದೇವೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಗೆ ಹೋಗಿ ಹೈಕಮಾಂಡ್‌ ಜೊತೆ ಚರ್ಚೆ ಮಾಡಿದ್ದೇನೆ. ಮುಡಾ ಹಗರಣ ಒಂದೇ ಅಲ್ಲ, ಪಕ್ಷ ಸಂಘಟನೆ ಬಗ್ಗೆಯೂ ಎಲ್ಲರು  ಚರ್ಚೆ ಮಾಡಿದ್ದೇವೆ. ಸಿಎಂ, ಡಿಸಿಎಂ ಹಾಗೂ ಹಲವು ಸಚಿವರು ಸಹ ದೆಹಲಿಗೆ ಬಂದಿದ್ದರು. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಸಂಪೂರ್ಣ ಚರ್ಚೆ ಮಾಡಿದ್ದೇವೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನೀವು ನಿರೀಕ್ಷೆ ಮಾಡಿದಂತ ವಿಚಾರಗಳು ದೆಹಲಿಯಲ್ಲಿ ಏನು ಚರ್ಚೆಯಾಗಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ.  ಸಂದರ್ಭ ಬಂದಾಗ ಅರ್ಕಾವತಿ ಡಿನೋಟಿಫಿಕೇಷನ್‌ ವರದಿ ಬಹಿರಂಗ ಮಾಡುತ್ತೇವೆ. ಸರ್ಕಾರದಲ್ಲಿ ಎಲ್ಲವೂ ಪಾರದರ್ಶಕವಾಗಿರುತ್ತದೆ. ನಾವು ಏನನ್ನೂ ಮುಚ್ಚಿಡುವ ಕೆಲಸ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

10 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

30 mins ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

41 mins ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

58 mins ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

1 hour ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

1 hour ago