ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೇನೆ. ಮುಡಾ ಹಗರಣ ಒಂದೇ ಅಲ್ಲ, ಪಕ್ಷ ಸಂಘಟನೆ ಬಗ್ಗೆಯೂ ಎಲ್ಲರು ಚರ್ಚೆ ಮಾಡಿದ್ದೇವೆ. ಸಿಎಂ, ಡಿಸಿಎಂ ಹಾಗೂ ಹಲವು ಸಚಿವರು ಸಹ ದೆಹಲಿಗೆ ಬಂದಿದ್ದರು. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಸಂಪೂರ್ಣ ಚರ್ಚೆ ಮಾಡಿದ್ದೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನೀವು ನಿರೀಕ್ಷೆ ಮಾಡಿದಂತ ವಿಚಾರಗಳು ದೆಹಲಿಯಲ್ಲಿ ಏನು ಚರ್ಚೆಯಾಗಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ. ಸಂದರ್ಭ ಬಂದಾಗ ಅರ್ಕಾವತಿ ಡಿನೋಟಿಫಿಕೇಷನ್ ವರದಿ ಬಹಿರಂಗ ಮಾಡುತ್ತೇವೆ. ಸರ್ಕಾರದಲ್ಲಿ ಎಲ್ಲವೂ ಪಾರದರ್ಶಕವಾಗಿರುತ್ತದೆ. ನಾವು ಏನನ್ನೂ ಮುಚ್ಚಿಡುವ ಕೆಲಸ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…