ಬೆಂಗಳೂರು: ರಾಜ್ಯದ ಪರವಾಗಿ ಪ್ರಮುಖ ಬೇಡಿಕೆಗಳನ್ನು ಕರ್ನಾಟಕದ ಮುಂದೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕಕ್ಕೆ ನಿರಾಶೆ ತಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಆಶ್ರಯ ಮನೆಗಳಿಗೆ ಹೆಚ್ಚಿನ ಹಣ ಕೇಳಿದ್ದೆವು. ಸಮಾಜ ಕಲ್ಯಾಣ ಇಲಾಖೆಗೆ ಇನ್ನೂ ಹೆಚ್ಚಿನ ಹಣ ಕೇಳಿದ್ದೆವು. ಕೇಂದ್ರದ ಯೋಜನೆಗಳಲ್ಲಿ ಹೆಚ್ಚಿನ ಅನುದಾನ ಕೇಳಿದ್ದೆವು. ನೀರಾವರಿ ಇಲಾಖೆಗೆ ಯಾವುದೇ ಅನುದಾನ ಬಿಡುಗಡೆ ಆಗಿಲ್ಲ. ಭದ್ರಾ ಮೇಲ್ದಂಡ ಯೋಜನೆ ಬಗ್ಗೆಯೂ ಪ್ರಸ್ತಾಪವನ್ನೇ ಮಾಡಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಬೆಂಗಳೂರು ಅಭಿವೃದ್ಧಿಗೆ ಏನೂ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಹೇಳಿದ ಹಾಗೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಗುಡುಗಿದರು.