ಬೆಂಗಳೂರು: ನವೆಂಬರ್‌ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಅಶೋಕ್ ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಾಗುತ್ತಿಲ್ಲ. ಅವರು ಹೇಳಿರುವ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ನಾವೆಲ್ಲಾ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಸಿಎಲ್‌ಪಿ ಸಭೆಯಲ್ಲಿ ಸಿಎಂ ಆಯ್ಕೆ ಆಯ್ತು. ಆ ಸಂದರ್ಭದಲ್ಲಿ ಅವರು ಎರಡೂವರೆ ವರ್ಷ ಮಾತ್ರ ಇರುತ್ತಾರೆ ಎಂದು ನಮಗೇನೂ ಹೈಕಮಾಂಡ್ ಹೇಳಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಈ ಮಧ್ಯೆ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತೋ ನೋಡೋಣ ಎಂದರು.
ಇನ್ನು ಬಿ.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ಅವರು ಯಾಕೆ ರಾಜೀನಾಮೆ ಕೊಟ್ಟರು ಎಂದು ಗೊತ್ತಿಲ್ಲ. ಈ ಬಗ್ಗೆ ಸಿಎಂಗೆ ಹೇಳಿರುತ್ತಾರೆ. ಅವರಿಗೆ ಏನು ಅಸಮಾಧಾನ ಎಂದು ಗೊತ್ತಿಲ್ಲ. ರಾಜೀನಾಮೆ ಕೊಟ್ಟ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದರು.