ಬೆಂಗಳೂರು: ಸಾಲ ವಸೂಲಿಗಿಳಿದು ಕಿರುಕುಳ ನೀಡುವ ಫೈನಾನ್ಸ್‌ಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿಮೀರಿದ್ದು, ಮನೆ ಬಾಗಿಲಿಗೆ ಬಂದು ಫೈನಾನ್ಸ್ ಸಿಬ್ಬಂದಿ ಜನತೆಗೆ ಕಿರುಕುಳ ನೀಡುತ್ತಿದ್ದಾರೆ.
ಕಿರುಕುಳದಿಂದ ಬೇಸತ್ತ ಜನರು ಆತ್ಮಹತ್ಯೆ ಮಾಡಿಕೊಂಡಿರುವ ನಿದರ್ಶನಗಳು ಇವೆ. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕಿರುಕುಳ ನೀಡಿದವರ ವಿರುದ್ಧ ಸುಮೊಟೋ ಕೇಸ್ ದಾಖಲಿಸಲಾಗುತ್ತದೆ. ಕಿರುಕುಳದ ಬಗ್ಗೆ ಎಸ್‌ಪಿ, ಡಿಸಿಗೆ ದೂರು ಕೊಡಬಹುದು ಎಂದರು.
ಇನ್ನು ದೂರು ನೀಡಿದ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ರಾಜ್ಯಾದ್ಯಂತ ಸಹಾಯವಾಣಿ ಆರಂಭಿಸಲಾಗಿದೆ. ಸುಗ್ರೀವಾಜ್ಞೆ ಕುರಿತು ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…